ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು ಆತನು ಲಾಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರುಗಿ ಯೆರೂಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬುದು ಮನಸ್ಸೆಗೆ ಮನದಟ್ಟಾಯಿತು.