1
2 ಅರಸು 2:9
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟು ಹೋಗುವ ಮೊದಲು, ನಾನು ನಿನಗೋಸ್ಕರ ಏನು ಮಾಡಬೇಕೆನ್ನುತ್ತೀ ಹೇಳು” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿನಗಿರುವ ಆತ್ಮದಲ್ಲಿ ನನಗೆ ಎರಡರಷ್ಟು ಪಾಲನ್ನು ಅನುಗ್ರಹಿಸು” ಎಂದು ಬೇಡಿಕೊಂಡನು.
Compare
Explore 2 ಅರಸು 2:9
2
2 ಅರಸು 2:11
ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ, ಪಕ್ಕನೆ ಅಗ್ನಿಮಯವಾದ ರಥಗಳು ನಡುವೆ ಬಂದು ಅವರಿಬ್ಬರನ್ನು ಬೇರ್ಪಡಿಸಿದವು. ಎಲೀಯನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಏರಿ ಹೋದನು.
Explore 2 ಅರಸು 2:11
3
2 ಅರಸು 2:10
ಆಗ ಎಲೀಯನು ಅವನಿಗೆ, “ನೀನು ಕಷ್ಟಕರವಾದುದ್ದನ್ನು ಕೇಳಿಕೊಂಡಿರುವೆ. ಆದರೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವುದಾದರೆ ಅದು ನಿನಗೆ ದೊರಕುವುದು. ಇಲ್ಲವಾದರೆ ದೊರಕುವುದಿಲ್ಲ” ಎಂದನು.
Explore 2 ಅರಸು 2:10
4
2 ಅರಸು 2:14
“ಎಲೀಯನ ದೇವರಾದ ಯೆಹೋವನೆಲ್ಲಿ?” ಎಂದು ಅಂದುಕೊಂಡು, ಆ ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು. ಎಲೀಷನು ಹೊಳೆಯನ್ನು ದಾಟಿಹೋದನು.
Explore 2 ಅರಸು 2:14
5
2 ಅರಸು 2:12
ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥಾರಥಾಶ್ವಗಳಾಗಿದ್ದವನೇ” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದ ಮೇಲೆ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.
Explore 2 ಅರಸು 2:12
6
2 ಅರಸು 2:8
ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು. ಇಬ್ಬರೂ ಒಣನೆಲದ ಮೇಲೆ ನಡೆದುಕೊಂಡು ಯೊರ್ದನನ್ನು ದಾಟಿದರು.
Explore 2 ಅರಸು 2:8
7
2 ಅರಸು 2:1
ಯೆಹೋವನು ಎಲೀಯನನ್ನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಸೇರಿಸಿಕೊಳ್ಳುವ ಸಮಯ ಬಂದಾಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.
Explore 2 ಅರಸು 2:1
Home
Bible
Plans
Videos