1
2 ಅರಸು 4:2
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಎಲೀಷನು ಆಕೆಗೆ, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ? ಹೇಳು ಎಂದನು.” ಅದಕ್ಕೆ ಆಕೆಯು, “ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ” ಎಂದು ಉತ್ತರ ಕೊಟ್ಟಳು.
Compare
Explore 2 ಅರಸು 4:2
2
2 ಅರಸು 4:1
ಒಂದು ದಿನ ಪ್ರವಾದಿ ಮಂಡಳಿಯಲ್ಲಿನ ಒಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ, “ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು. ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನು ಎಂಬುದು ನಿನಗೆ ಗೊತ್ತಿದೆಯಲ್ಲಾ. ಸಾಲಕೊಟ್ಟವನು, ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ಕರೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ” ಎಂದು ಮೊರೆಯಿಟ್ಟಳು.
Explore 2 ಅರಸು 4:1
3
2 ಅರಸು 4:3
ಆಗ ಎಲೀಷನು ಆಕೆಗೆ, “ಹೋಗಿ, ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ.
Explore 2 ಅರಸು 4:3
4
2 ಅರಸು 4:4
ಅನಂತರ, ನೀನು, ನಿನ್ನ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಎಣ್ಣೆಯನ್ನು ಪಾತ್ರೆಗಳಲ್ಲಿ ಹೊಯ್ದು ತುಂಬಿದವುಗಳನ್ನೆಲ್ಲಾ ಒಂದು ಕಡೆಯಿಡು” ಎಂದು ಹೇಳಿದನು.
Explore 2 ಅರಸು 4:4
5
2 ಅರಸು 4:6
ಪಾತ್ರೆಗಳೆಲ್ಲಾ ತುಂಬಿದಾಗ ಆಕೆಯು ಮಗನಿಗೆ, “ಇನ್ನೊಂದು ಪಾತ್ರೆಯನ್ನು ತಂದಿಡು” ಎನ್ನಲು ಅವನು, “ಪಾತ್ರೆಗಳೆಲ್ಲ ಮುಗಿದು ಹೋದವು” ಎಂದು ಉತ್ತರಕೊಟ್ಟನು. ಕೂಡಲೇ ಎಣ್ಣೆ ಉಕ್ಕುವುದು ನಿಂತುಹೋಯಿತು.
Explore 2 ಅರಸು 4:6
6
2 ಅರಸು 4:7
ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ, ಎಣ್ಣೆಯನ್ನು ಮಾರಿ ಸಾಲತೀರಿಸು. ಉಳಿದ ಹಣದಿಂದ ನೀನೂ, ನಿನ್ನ ಮಕ್ಕಳು ಜೀವನಮಾಡಿರಿ” ಎಂದನು.
Explore 2 ಅರಸು 4:7
7
2 ಅರಸು 4:5
ಆಕೆಯು ಹೋಗಿ ಮಕ್ಕಳನ್ನು ಒಳಗೆ ಕರೆದುಕೊಂಡು, ಬಾಗಿಲನ್ನು ಮುಚ್ಚಿ, ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು.
Explore 2 ಅರಸು 4:5
8
2 ಅರಸು 4:34
ಅನಂತರ ಹುಡುಗನ ಮೇಲೆ ಬೋರಲುಬಿದ್ದು ತನ್ನ ಬಾಯಿ, ಕಣ್ಣು, ಕೈಗಳನ್ನು ಅವನ ಬಾಯಿ, ಕಣ್ಣು, ಕೈಗಳಿಗೆ ಮುಟ್ಟಿಸಿದ್ದರಿಂದ ಹುಡುಗನ ದೇಹವು ಬೆಚ್ಚಗಾಯಿತು.
Explore 2 ಅರಸು 4:34
Home
Bible
Plans
Videos