1
2 ಅರಸು 5:1
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಅರಾಮ್ಯರ ಅರಸನಿಗೆ ನಾಮಾನನೆಂಬ ಒಬ್ಬ ಸೇನಾಧಿಪತಿಯಿದ್ದನು. ಯೆಹೋವನು ಇವನ ಮುಖಾಂತರವಾಗಿ ಅರಾಮ್ಯರಿಗೆ ಜಯವನ್ನು ಅನುಗ್ರಹಿಸಿದ್ದದರಿಂದ ಅರಸನು ಇವನನ್ನು ಮಹಾ ಪುರುಷನೆಂದೂ ಸನ್ಮಾನಯೋಗ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಕುಷ್ಠರೋಗಿಯಾಗಿದ್ದನು.
Compare
Explore 2 ಅರಸು 5:1
2
2 ಅರಸು 5:10
ಎಲೀಷನು ಅವನಿಗೆ, “ಹೋಗಿ ಯೊರ್ದನ್ ನದಿಯಲ್ಲಿ ಏಳು ಸಾರಿ ಮುಳುಗಿ ಬಾ, ಆಗ ನಿನ್ನ ದೇಹವು ಮೊದಲಿನಂತಾಗುವುದು; ನೀನು ಶುದ್ಧನಾಗುವಿ” ಎಂದು ಹೇಳಿ ಕಳುಹಿಸಿದನು.
Explore 2 ಅರಸು 5:10
3
2 ಅರಸು 5:14
ಅವನು ಯೊರ್ದನ್ ನದಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು.
Explore 2 ಅರಸು 5:14
4
2 ಅರಸು 5:11
ನಾಮಾನನು ಇದನ್ನು ಕೇಳಿ ಕೋಪಗೊಂಡು, “ಇದೇನು? ಅವನು ಹೊರಗೆ ಬಂದು ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ನನ್ನ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು.
Explore 2 ಅರಸು 5:11
5
2 ಅರಸು 5:13
ಆಗ ಅವನ ಸೇವಕರು ಹತ್ತಿರ ಬಂದು ಅವನಿಗೆ, “ಸ್ವಾಮೀ, ಪ್ರವಾದಿಯು ಒಂದು ಕಠಿಣವಾದ ಕೆಲಸ ಹೇಳಿದ್ದರೆ, ಅದನ್ನು ನೀವು ಮಾಡುತ್ತಿದ್ದಿರಲ್ಲವೇ? ಹಾಗಾದರೆ ‘ಸ್ನಾನಮಾಡಿ ಶುದ್ಧನಾಗು’ ಎಂದು ಹೇಳಿದರೆ ಯಾಕೆ ಅದರಂತೆ ಮಾಡಬಾರದು” ಎಂದು ಹೇಳಿದರು.
Explore 2 ಅರಸು 5:13
6
2 ಅರಸು 5:3
ಆಕೆಯು ಒಂದು ದಿನ ತನ್ನ ಯಜಮಾನಿಯ ಬಳಿ, “ನಮ್ಮ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಹತ್ತಿರ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅವನು ನನ್ನ ಯಜಮಾನನನ್ನು ಕುಷ್ಠರೋಗದಿಂದ ವಾಸಿಮಾಡುತ್ತಿದ್ದನು” ಎಂದು ಹೇಳಿದಳು.
Explore 2 ಅರಸು 5:3
Home
Bible
Plans
Videos