1
2 ಅರಸು 6:17
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
“ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ” ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥಾರಥಾಶ್ವಗಳು ಆ ಸೇವಕನಿಗೆ ಕಂಡವು.
Compare
Explore 2 ಅರಸು 6:17
2
2 ಅರಸು 6:16
ಆಗ ಎಲೀಷನು ಅವನಿಗೆ, “ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ” ಎಂದು ಹೇಳಿ
Explore 2 ಅರಸು 6:16
3
2 ಅರಸು 6:15
ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಬಂದು ನೋಡಿದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು ತನ್ನ ಯಜಮಾನನಿಗೆ, “ಅಯ್ಯೋ, ಸ್ವಾಮಿ ನಾವು ಏನು ಮಾಡೋಣ?” ಎಂದನು.
Explore 2 ಅರಸು 6:15
4
2 ಅರಸು 6:18
ಶತ್ರುಗಳಾದ ಅರಾಮ್ಯರು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮಿ, ಈ ಜನರನ್ನು ಕುರುಡರನ್ನಾಗಿ ಮಾಡು” ಎಂದು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು.
Explore 2 ಅರಸು 6:18
5
2 ಅರಸು 6:6
ದೇವರ ಮನುಷ್ಯನು ಅವನಿಗೆ, “ಅದು ಎಲ್ಲಿ ಬಿದ್ದಿತು?” ಎಂದು ಕೇಳಲು, ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೇವರ ಮನುಷ್ಯನು ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಮುರಿದು ಅಲ್ಲಿ ಹಾಕಿದನು, ಕೂಡಲೆ ಕೊಡಲಿಯು ಮೇಲಕ್ಕೆ ಬಂದು ತೇಲಾಡಿತು.
Explore 2 ಅರಸು 6:6
6
2 ಅರಸು 6:5
ಒಬ್ಬನ ಕೊಡಲಿಯು ಕೈಜಾರಿ ನೀರೊಳಗೆ ಬಿದ್ದಿತು. ಆಗ ಅವನು, “ಅಯ್ಯೋ, ಸ್ವಾಮಿ ನಾನು ಅದನ್ನು ಸಾಲವಾಗಿ ತಂದಿದ್ದೆನು” ಎಂದು ಕೂಗಿದನು.
Explore 2 ಅರಸು 6:5
7
2 ಅರಸು 6:7
ಎಲೀಷನು “ಅದನ್ನು ತೆಗೆದುಕೋ” ಎಂದು ಆಜ್ಞಾಪಿಸಲು ಆ ಮನುಷ್ಯನು ಕೈಚಾಚಿ ಅದನ್ನು ತೆಗೆದುಕೊಂಡನು.
Explore 2 ಅರಸು 6:7
Home
Bible
Plans
Videos