1
ಅ. ಕೃ. 11:26
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.
Compare
Explore ಅ. ಕೃ. 11:26
2
ಅ. ಕೃ. 11:23-24
ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು, ನೀವು ಪೂರ್ಣಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರಿ ಎಂದು ಅವರಿಗೆ ಬುದ್ಧಿಹೇಳಿದನು. ಆಗ ಬಹುಮಂದಿ ಕರ್ತನೊಂದಿಗೆ ಸೇರಿಕೊಂಡರು.
Explore ಅ. ಕೃ. 11:23-24
3
ಅ. ಕೃ. 11:17-18
ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವುದಕ್ಕೆ ನಾನು ಶಕ್ತನೋ? ಎಂದು ಹೇಳಿದನು. ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.
Explore ಅ. ಕೃ. 11:17-18
Home
Bible
Plans
Videos