ದೇವರಾತ್ಮನು ಫಿಲಿಪ್ಪನಿಗೆ, “ನೀನು ಆ ರಥದ ಹತ್ತಿರ ಹೋಗಿ ಅದರೊಂದಿಗೆ ಸೇರಿ ನಡೆ” ಎಂದು ಹೇಳಿದನು. ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, “ಎಲೈ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು. ಅದಕ್ಕೆ ಅವನು, “ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?” ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು.