1
ಆಮೋ 7:14-15
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನು, ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ. ಯೆಹೋವನು ನನ್ನನ್ನು ಮಂದೆ ಕಾಯುವವರಿಂದ ತಪ್ಪಿಸಿ, ‘ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದನೆ ಮಾಡು’ ಎಂದು ನನಗೆ ಅಪ್ಪಣೆ ಕೊಟ್ಟನು.
Compare
Explore ಆಮೋ 7:14-15
2
ಆಮೋ 7:8
ಯೆಹೋವನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು ನಾನು, “ಒಂದು ನೂಲುಗುಂಡು” ಎಂದು ಉತ್ತರ ಕೊಟ್ಟೆನು. ಆಗ ಕರ್ತನು, “ಇಗೋ, ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನೂಲುಗುಂಡನ್ನು ಇಡುತ್ತೇನೆ. ಇನ್ನು ಅವರನ್ನು ಕಂಡುಕಾಣದಂತೆ ದಂಡಿಸುವೆನು.
Explore ಆಮೋ 7:8
Home
Bible
Plans
Videos