1
ಪ್ರಸ 4:9-10
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು. ಅವರ ಪ್ರಯಾಸಕ್ಕೆ ಒಳ್ಳೆಯ ಲಾಭವನ್ನು ಸಂಪಾದಿಸಬಹುದು. ಒಬ್ಬನು ಬಿದ್ದರೆ, ಇನ್ನೊಬ್ಬನು ತನ್ನ ಸ್ನೇಹಿತನನ್ನು ಮೇಲಕ್ಕೆ ಎಬ್ಬಿಸುವನು. ಒಬ್ಬನು ಒಬ್ಬಂಟ್ಟಿಗನಾಗಿ ಬಿದ್ದರೆ, ಅವನನ್ನು ಮೇಲಕ್ಕೆ ಎಬ್ಬಿಸುವವನು ಯಾರೂ ಇಲ್ಲ, ಅವನ ಗತಿ ದುರ್ಗತಿಯೇ.
Compare
Explore ಪ್ರಸ 4:9-10
2
ಪ್ರಸ 4:12
ಒಬ್ಬನನ್ನು ಮತ್ತೊಬ್ಬನು ಜಯಿಸಬಹುದು, ಆದರೆ ಗೆದ್ದವನನ್ನು ಇಬ್ಬರು ಎದುರಿಸಿ ನಿಲ್ಲಿಸಬಹುದು. ಮೂರು ಹುರಿಯ ಹಗ್ಗ ಬೇಗನೆ ಕಿತ್ತುಹೋಗುವುದಿಲ್ಲ.
Explore ಪ್ರಸ 4:12
3
ಪ್ರಸ 4:11
ಮತ್ತು ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ, ಆದರೆ ಒಬ್ಬನು ಹೇಗೆ ಬೆಚ್ಚಗಿರುತ್ತಾನೆ?
Explore ಪ್ರಸ 4:11
4
ಪ್ರಸ 4:6
ಗಾಳಿಯನ್ನು ಹಿಂದಟ್ಟುವ ಹಾಗೆಯೇ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ ನೆಮ್ಮದಿಯಾಗಿ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು.
Explore ಪ್ರಸ 4:6
5
ಪ್ರಸ 4:4
ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
Explore ಪ್ರಸ 4:4
6
ಪ್ರಸ 4:13
ಎಚ್ಚರಿಕೆಯ ಮಾತಿಗೆ ಕಿವಿಗೊಡದ ಮುದಕನೂ, ಮೂಢನೂ ಆದ ಅರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು.
Explore ಪ್ರಸ 4:13
Home
Bible
Plans
Videos