1
ಪ್ರಸ 9:10
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.
Compare
Explore ಪ್ರಸ 9:10
2
ಪ್ರಸ 9:11
ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೀಣರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.
Explore ಪ್ರಸ 9:11
3
ಪ್ರಸ 9:9
ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದುಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ.
Explore ಪ್ರಸ 9:9
4
ಪ್ರಸ 9:7
ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.
Explore ಪ್ರಸ 9:7
5
ಪ್ರಸ 9:18
ಯುದ್ಧದ ಆಯುಧಗಳಿಗಿಂತಲೂ ಜ್ಞಾನವೇ ಉತ್ತಮ. ಆದರೆ ಒಬ್ಬ ಪಾಪಿಯು ಬಹಳ ಶುಭವನ್ನು ಹಾಳುಮಾಡುತ್ತಾನೆ.
Explore ಪ್ರಸ 9:18
6
ಪ್ರಸ 9:17
ಹುಚ್ಚರನ್ನು ಆಳುವವನ ಕೂಗಿಗಿಂತ ಜ್ಞಾನಿಯ ಮೆಲ್ಲನೆಯ ಮಾತುಗಳು ಕಿವಿಗೆ ಕೇಳಿಸುತ್ತದೆ.
Explore ಪ್ರಸ 9:17
7
ಪ್ರಸ 9:5
ಜೀವಿಸುವವರಿಗೆ ಸಾಯುತ್ತೇವೆಂಬ ತಿಳಿವಳಿಕೆಯು ಉಂಟು. ಸತ್ತವರಿಗೋ ಯಾವ ತಿಳಿವಳಿಕೆಯೂ ಇಲ್ಲ. ಅವರಿಗೆ ಇನ್ನು ಮೇಲೆ ಪ್ರತಿಫಲವು ಇಲ್ಲ. ಅವರ ಜ್ಞಾಪಕವೇ ಇಲ್ಲ.
Explore ಪ್ರಸ 9:5
Home
Bible
Plans
Videos