ಅವನು ಎಸ್ತೇರಳಿಗೆ, “ಯೆಹೂದ್ಯರೆಲ್ಲಾ ನಾಶವಾದರೂ ನಾನೊಬ್ಬಳು ಅರಮನೆಯಲ್ಲಿರುವುದರಿಂದ ಉಳಿಯುವೆನು ಎಂದು ಭಾವಿಸಿಕೊಳ್ಳಬೇಡ. ನೀನು ಈಗ ಸುಮ್ಮನಿದ್ದುಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ, ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು” ಎಂದು ಹೇಳಿಕಳುಹಿಸಿದನು.