ಮೋಶೆಯು ದೊಡ್ಡವನಾದ ಮೇಲೆ, ಸ್ವಜನರ ಬಳಿಗೆ ಹೋಗಿ ಅವರ ಬಿಟ್ಟೀಕೆಲಸಗಳನ್ನು ನೋಡುತ್ತಿದ್ದನು. ಆಗ ಒಬ್ಬ ಐಗುಪ್ತ್ಯದವನು ತನ್ನ ಸ್ವಂತ ಜನರಾದ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಹೊಡೆಯುವುದನ್ನು ಕಂಡನು. ಮೋಶೆ ಅತ್ತಿತ್ತ ನೋಡಿ, ಯಾರೂ ಇಲ್ಲವೆಂದು ತಿಳಿದು, ಆ ಐಗುಪ್ತ್ಯದವನನ್ನು ಹೊಡೆದು ಕೊಂದುಹಾಕಿ ಅವನ ಶವವನ್ನು ಮರಳಿನಲ್ಲಿ ಮುಚ್ಚಿಹಾಕಿದನು.