1
ವಿಮೋ 23:25-26
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು. ನಿಮ್ಮ ದೇಶದಲ್ಲಿ ಗರ್ಭಪಾತವಾಗಲಿ, ಬಂಜೆತನವಾಗಲಿ ಇರುವುದೇ ಇಲ್ಲ. ನಿಮಗೆ ಸಂಪೂರ್ಣವಾದ ಆಯುಷ್ಯವನ್ನು ದಯಪಾಲಿಸುವೆನು.
Compare
Explore ವಿಮೋ 23:25-26
2
ವಿಮೋ 23:20
ಇಗೋ ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೂ, ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೂ ದೂತನನ್ನು ನಿಮ್ಮ ಮುಂದಾಗಿ ಕಳುಹಿಸಿದ್ದೇನೆ.
Explore ವಿಮೋ 23:20
3
ವಿಮೋ 23:22
ನೀವು ಆತನ ಮಾತುಗಳನ್ನು ಶ್ರದ್ಧೆಯಿಂದ ಆಲಿಸಿ ನನ್ನ ಆಜ್ಞೆಗಳ ಪ್ರಕಾರ ನಡೆದುಕೊಂಡರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ, ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.
Explore ವಿಮೋ 23:22
4
ವಿಮೋ 23:2-3
ದುಷ್ಟ ಕಾರ್ಯವನ್ನು ಮಾಡುವವರು ಬಹಳಮಂದಿ ಇದ್ದಾರೆ, ಆದಾಗ್ಯೂ ನೀವು ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು. ಇದಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.
Explore ವಿಮೋ 23:2-3
5
ವಿಮೋ 23:1
ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.
Explore ವಿಮೋ 23:1
Home
Bible
Plans
Videos