ದೀಪವು ಯಾವಾಗಲೂ ಉರಿಯುವಂತೆ ಇಸ್ರಾಯೇಲ್ಯರು ಒಲಿವ್ ಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಒಲಿವ್ ಎಣ್ಣೆಯನ್ನು ತೆಗೆದುಕೊಂಡು ಬರುವಂತೆ ಅವರಿಗೆ ಅಪ್ಪಣೆಕೊಡಬೇಕು. ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.