ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು. ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.