“ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯನ ಮಗನೂ ಆಗಿರುವ ಬೆಚಲೇಲನೆಂಬುವನನ್ನು ಹೆಸರು ಹಿಡಿದು ಕರೆದಿದ್ದೇನೆ. ಕಲಾತ್ಮಕವಾದ ವಿನ್ಯಾಸಗಳನ್ನು ಮಾಡುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ, ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸಗಳನ್ನು ಮಾಡುವುದಕ್ಕೂ, ಅವನಿಗೆ ದೇವರಾತ್ಮವನ್ನು ದಯಪಾಲಿಸಿ, ಅದಕ್ಕೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪ ಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ.