ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ದಯೆಯು ದೊರಕಿತೆಂಬುದು ನೀನು ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದುಬರುವುದು? ಇದರಿಂದ ನಾನೂ ಮತ್ತು ನಿನ್ನ ಪ್ರಜೆಗಳಾದ ಇವರೂ ಭೂಮಿಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷತೆಯುಳ್ಳವರೆಂಬುದು ಗೊತ್ತಾಗುವುದು” ಅಂದನು.
ಯೆಹೋವನು ಮೋಶೆಗೆ, “ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು” ಎಂದು ಹೇಳಿದನು.