ಆದರೂ ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆಯಾಗಬಾರದು ಎಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದುದರಿಂದಲೇ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞಮಾಡಿ ಬರುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಕೂಗಿಕೊಳ್ಳುತ್ತಿದ್ದಾರೆ. ಈ ಜನರು ವ್ಯರ್ಥವಾದ ಮಾತುಗಳಿಗೆ ಗಮನ ಕೊಡದಂತೆ ನೀವು ಅವರ ಮೇಲೆ ಹೆಚ್ಚು ಕೆಲಸವನ್ನು ಹೊರಿಸಿರಿ. ಅವರು ದುಡಿಯಲಿ” ಎಂದು ಆಜ್ಞಾಪಿಸಿದನು.