1
ವಿಮೋ 8:18-19
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
IRVKan
ಮಂತ್ರಗಾರರು ತಮ್ಮ ಮಂತ್ರವಿದ್ಯೆಗಳಿಂದ ಹಾಗೆಯೇ ಹೇನುಗಳನ್ನು ಉಂಟುಮಾಡುವುದಕ್ಕೆ ಪ್ರಯತ್ನಿಸಿದರೂ ಆಗದೆ ಹೋಯಿತು. ಆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಇದ್ದವು. ಆಗ ಆ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ” ಎಂದು ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು. ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಫರೋಹನು ಅವರ ಮಾತನ್ನು ಕೇಳದೆ ಹೋದನು.
Compare
Explore ವಿಮೋ 8:18-19
2
ವಿಮೋ 8:1
ನಂತರ ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ, “ನೀನು ಫರೋಹನ ಬಳಿಗೆ ಹೋಗಿ ಹೀಗೆ ಹೇಳಬೇಕು, ‘ಯೆಹೋವನು ಆಜ್ಞಾಪಿಸುವುದೇನೆಂದರೆ: ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರಿಗೆ ಅಪ್ಪಣೆಕೊಡಬೇಕು.
Explore ವಿಮೋ 8:1
3
ವಿಮೋ 8:15
ಆದರೆ ಫರೋಹನು ಕಪ್ಪೆಗಳ ಕಾಟವು ತೀರಿತೆಂದು ತಿಳಿದುಕೊಂಡಾಗ, ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಯೆಹೋವನು ಹೇಳಿದಂತೆಯೇ ಅವನು, ಮೋಶೆ ಮತ್ತು ಆರೋನನ ಮಾತನ್ನು ಕೇಳದೆ ಹೋದನು.
Explore ವಿಮೋ 8:15
4
ವಿಮೋ 8:2
ಅಪ್ಪಣೆಕೊಡದೆ ಹೋದರೆ, ನಾನು ನಿನ್ನ ದೇಶದಲ್ಲೆಲ್ಲಾ ಕಪ್ಪೆಗಳಿಂದ ಉಪದ್ರವ ಕೊಡುವೆನು.
Explore ವಿಮೋ 8:2
5
ವಿಮೋ 8:16
ತರುವಾಯ ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳೆಲ್ಲಾ ಹೇನುಗಳಾಗುವುದು’” ಎಂದನು.
Explore ವಿಮೋ 8:16
6
ವಿಮೋ 8:24
ಯೆಹೋವನು ಹಾಗೆಯೇ ಮಾಡಿದನು. ಬಾಧಿಸುವ ನೊಣಗಳು ಫರೋಹನ ಅರಮನೆಯಲ್ಲಿಯೂ, ಅವನ ಪರಿವಾರದವರ ಮನೆಗಳಲ್ಲಿಯೂ, ಸಮಸ್ತ ಐಗುಪ್ತ ದೇಶದಲ್ಲಿಯೂ ವಿಪರೀತವಾಗಿ ತುಂಬಿಕೊಂಡವು. ಅವುಗಳಿಂದ ದೇಶವು ಹಾಳಾಗಿಹೋಯಿತು.
Explore ವಿಮೋ 8:24
Home
Bible
Plans
Videos