1
ಆದಿ 39:2
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಯೆಹೋವನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು.
Compare
Explore ಆದಿ 39:2
2
ಆದಿ 39:6
ಅವನು ತನ್ನ ಆಸ್ತಿಯನ್ನೆಲ್ಲಾ ಯೋಸೇಫನ ವಶಕ್ಕೆ ಒಪ್ಪಿಸಿದನು. ಇವನು ತನ್ನ ಬಳಿಯಲ್ಲೇ ಇದ್ದುದರಿಂದ ತಾನು ತಿನ್ನುವ ಆಹಾರ ಒಂದನ್ನೇ ಹೊರತು ಬೇರೆ ಯಾವ ವಿಷಯದಲ್ಲೂ ಚಿಂತಿಸುತ್ತಿರಲಿಲ್ಲ. ಯೋಸೇಫನು ರೂಪವಂತನೂ, ಸುಂದರನೂ ಆಗಿದ್ದನು.
Explore ಆದಿ 39:6
3
ಆದಿ 39:22
ಸೆರೆಮನೆಯ ಯಜಮಾನನು ಸೆರೆಯಲ್ಲಿದ್ದವರೆಲ್ಲರನ್ನೂ ಯೋಸೇಫನ ವಶಕ್ಕೆ ಒಪ್ಪಿಸಿ ಅವನನ್ನು ಮೇಲ್ವಿಚಾರಕನನ್ನಾಗಿ ಮಾಡಿದನು. ಅವರು ಮಾಡಬೇಕಾದ ಎಲ್ಲ ಕೆಲಸವನ್ನು ಯೋಸೇಫನೇ ಮಾಡಿಸುತ್ತಿದ್ದನು.
Explore ಆದಿ 39:22
4
ಆದಿ 39:20-21
ಆಗ ಯೋಸೇಫನ ದಣಿಯು ಅವನನ್ನು ಹಿಡಿದು ಅರಸನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು. ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.
Explore ಆದಿ 39:20-21
5
ಆದಿ 39:7-9
ಹೀಗಿರುವಲ್ಲಿ ಯೋಸೇಫನ ದಣಿಯ ಹೆಂಡತಿಯು ಅವನನ್ನು ಮೋಹಿಸಿ “ನನ್ನ ಸಂಗಡ ಸಂಗಮಿಸಲು ಬಾ” ಎಂದಳು. ಆದರೆ ಅವನು ಒಪ್ಪದೆ, “ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ. ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು.
Explore ಆದಿ 39:7-9
6
ಆದಿ 39:11-12
ಹೀಗಿರಲು ಒಂದು ದಿನ ಅವನು ತನ್ನ ಕೆಲಸದ ಮೇಲೆ ಮನೆಗೆ ಬಂದಾಗ ಮನೆಯೊಳಗೆ ಯಾವ ಸೇವಕರೂ ಇರಲಿಲ್ಲ. ಆಕೆ ಅವನ ಬಟ್ಟೆಯನ್ನು ಹಿಡಿದುಕೊಂಡು, “ನನ್ನೊಂದಿಗೆ ಸಂಗಮಿಸಲು ಬಾ” ಎಂದು ಕರೆಯಲು, ಅವನು ತನ್ನ ಬಟ್ಟೆಯನ್ನು ಆಕೆಯ ಕೈಯಲ್ಲೇ ಬಿಟ್ಟು ತಪ್ಪಿಸಿಕೊಂಡು ಹೊರಗೆ ಓಡಿಹೋದನು.
Explore ಆದಿ 39:11-12
Home
Bible
Plans
Videos