ಫರೋಹನು ಯೋಸೇಫನಿಗೆ, “ದೇವರು ಇದನ್ನೆಲ್ಲಾ ನಿನಗೆ ತಿಳಿಸಿರುವುದರಿಂದ ನಿನಗೆ ಸಮಾನನಾದ ಬುದ್ಧಿ, ವಿವೇಕವುಳ್ಳ ಪುರುಷನು ಯಾರೂ ಇಲ್ಲ. ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು. ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು. ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು” ಎಂದು ಹೇಳಿದನು.