1
ಆದಿ 42:21
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, “ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ” ಎಂದು ಮಾತನಾಡಿಕೊಂಡರು.
Compare
Explore ಆದಿ 42:21
2
ಆದಿ 42:6
ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.
Explore ಆದಿ 42:6
3
ಆದಿ 42:7
ಯೋಸೇಫನು ಅವರನ್ನು ಕಂಡಾಗ ಅವರ ಗುರುತು ಹಿಡಿದು ತನ್ನ ಅಣ್ಣಂದಿರೆಂದು ತಿಳಿದರೂ ಅವರಿಗೆ ಅನ್ಯನಂತೆ ತೋರ್ಪಡಿಸಿಕೊಂಡು ಕಠಿಣ ನುಡಿಯಿಂದ, “ನೀವು ಎಲ್ಲಿಂದ ಬಂದವರು” ಎಂದು ಕೇಳಿದನು. ಅವರು, “ಧಾನ್ಯವನ್ನು ಕೊಂಡುಕೊಳ್ಳುವುದಕ್ಕೊಸ್ಕರ ಕಾನಾನ್ ದೇಶದಿಂದ ಬಂದಿದ್ದೇವೆ” ಎಂದರು.
Explore ಆದಿ 42:7
Home
Bible
Plans
Videos