ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ,
“ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ,
ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು,
ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ
ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ.
ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ,
ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.