ರೂಬೇನನೇ, ನೀನು ನನ್ನ ಚೊಚ್ಚಲಮಗನೂ, ನನ್ನ ಚೈತನ್ಯಸ್ವರೂಪನೂ, ನನ್ನ ಪ್ರಥಮಫಲವೂ,
ಗೌರವದಲ್ಲಿಯೂ, ಅಧಿಕಾರದಲ್ಲಿಯೂ ಪ್ರಮುಖನೂ ಆಗಿದ್ದೀ.
ಆದರೆ ದಡಮೀರಿದ ಪ್ರವಾಹದಂತಿರುವ ನೀನು ಇನ್ನು ಶ್ರೇಷ್ಠನಾಗುವುದಿಲ್ಲ.
ಏಕೆಂದರೆ ನೀನು ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ,
ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು!