1
ಆದಿ 50:20
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.
Compare
Explore ಆದಿ 50:20
2
ಆದಿ 50:19
ಯೋಸೇಫನು ಅವರಿಗೆ, “ಹೆದರಬೇಡಿರಿ, ನಾನೇನು ದೇವರ ಸ್ಥಾನದಲ್ಲಿ ಇದ್ದೇನೋ?
Explore ಆದಿ 50:19
3
ಆದಿ 50:21
ಆದುದರಿಂದ ನೀವು ಸ್ವಲ್ಪವೂ ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮಗೆ ಸೇರಿದವರೆಲ್ಲರನ್ನೂ ಪೋಷಿಸುವೆನು. ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತನಾಡಿದನು.
Explore ಆದಿ 50:21
4
ಆದಿ 50:17
“ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ. ಆದರೂ ನಮ್ಮ ತಂದೆಯ ದೇವರನ್ನು ಆರಾಧಿಸುವವರು, ಸೇವಕರೂ ಆದ ನಮ್ಮ ಅಪರಾಧವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇವೆ” ಎಂದು ಯೋಸೇಫನ ಬಳಿ ಬೇಡಿಕೊಳ್ಳಿರಿ ಎಂದು ಹೇಳಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು.
Explore ಆದಿ 50:17
5
ಆದಿ 50:24
ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.
Explore ಆದಿ 50:24
6
ಆದಿ 50:25
ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು. ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು” ಎಂದು ಅವರಿಂದ ಪ್ರಮಾಣಮಾಡಿಸಿದನು.
Explore ಆದಿ 50:25
7
ಆದಿ 50:26
ಯೋಸೇಫನು ನೂರಹತ್ತು ವರ್ಷದವನಾಗಿ ಪ್ರಾಣ ಬಿಟ್ಟನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತ ದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು.
Explore ಆದಿ 50:26
Home
Bible
Plans
Videos