1
ಯೆಶಾ 60:1
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.
Compare
Explore ಯೆಶಾ 60:1
2
ಯೆಶಾ 60:3
ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು.
Explore ಯೆಶಾ 60:3
3
ಯೆಶಾ 60:2
ಇಗೋ, ಕತ್ತಲು ಭೂಮಿಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವುದು.
Explore ಯೆಶಾ 60:2
4
ಯೆಶಾ 60:22
ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು.
Explore ಯೆಶಾ 60:22
5
ಯೆಶಾ 60:19
ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.
Explore ಯೆಶಾ 60:19
6
ಯೆಶಾ 60:20
ನಿನ್ನ ಸೂರ್ಯನು ಇನ್ನು ಮುಳುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಯಾಗುವುದು.
Explore ಯೆಶಾ 60:20
7
ಯೆಶಾ 60:5
ನೀನು ಅವರನ್ನು ನೋಡಿ ಸಂತೋಷ ಸಂಭ್ರಮ ಪಡುವೆ, ನಿನ್ನ ಹೃದಯವು ಹರ್ಷಿಸಿ ಉಲ್ಲಾಸಿಸುವುದು; ಏಕೆಂದರೆ ಸಮುದ್ರ ವ್ಯಾಪಾರದ ಸಮೃದ್ಧಿಯು ನಿನಗೆ ಅತಿಯಾದ ಲಾಭತರುವುದು. ಕಡೆಗೆ ತಿರುಗುವುದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವುದು.
Explore ಯೆಶಾ 60:5
8
ಯೆಶಾ 60:4
ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರಿಬರುತ್ತಾರೆ; ಗಂಡುಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ.
Explore ಯೆಶಾ 60:4
9
ಯೆಶಾ 60:21
ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.
Explore ಯೆಶಾ 60:21
10
ಯೆಶಾ 60:18
ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.
Explore ಯೆಶಾ 60:18
11
ಯೆಶಾ 60:11
ಜನಾಂಗಗಳ ಐಶ್ವರ್ಯವನ್ನು ನಿನ್ನಲ್ಲಿಗೆ ತರುತ್ತಿರುವರು. ಅವುಗಳ ಅರಸರು ಮೆರವಣಿಗೆಯಾಗಿ ಬರುತ್ತಿರುವರು; ಇದರಿಂದ ನಿನ್ನ ಬಾಗಿಲುಗಳು ಹಗಲಿರುಳೂ ಮುಚ್ಚದೆ ಸದಾ ತೆರೆದಿರುವವು.
Explore ಯೆಶಾ 60:11
12
ಯೆಶಾ 60:6
ಉಷ್ಟ್ರಸಮೂಹವೂ, ಮಿದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಅವೆಲ್ಲವೂ ಬಂಗಾರವನ್ನೂ, ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.
Explore ಯೆಶಾ 60:6
13
ಯೆಶಾ 60:10
ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಪುನಃ ಕಟ್ಟುವರು, ಅವರ ಅರಸರು ನಿನ್ನನ್ನು ಆರಾಧಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದು, ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.
Explore ಯೆಶಾ 60:10
14
ಯೆಶಾ 60:15
ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು, ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು.
Explore ಯೆಶಾ 60:15
15
ಯೆಶಾ 60:16
ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.
Explore ಯೆಶಾ 60:16
Home
Bible
Plans
Videos