1
ಯೆಶಾ 65:24
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.
Compare
Explore ಯೆಶಾ 65:24
2
ಯೆಶಾ 65:17
“ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು.
Explore ಯೆಶಾ 65:17
3
ಯೆಶಾ 65:23
ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.
Explore ಯೆಶಾ 65:23
4
ಯೆಶಾ 65:22
ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು; ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವುದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಸಂಪೂರ್ಣವಾಗಿ ಅನುಭವಿಸುವರು.
Explore ಯೆಶಾ 65:22
5
ಯೆಶಾ 65:20
ಕೆಲವು ದಿನ ಮಾತ್ರ ಬದುಕತಕ್ಕ ಕೂಸಾಗಲಿ, ವೃದ್ಧನಾಗಲಿ ಅಲ್ಲಿ ಇರುವುದಿಲ್ಲ; ಯುವಕನು ನೂರು ವರ್ಷದೊಳಗೆ ಸಾಯನು, ಪಾಪಿಷ್ಠನಿಗೂ ನೂರು ವರ್ಷದೊಳಗೆ ಶಾಪ ತಗಲದು.
Explore ಯೆಶಾ 65:20
6
ಯೆಶಾ 65:25
ತೋಳವು ಕುರಿಯ ಸಂಗಡ ಮೇಯುವುದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು, ಹಾವಿಗೆ ಧೂಳೇ ಆಹಾರವಾಗುವುದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ” ಎಂದು ಯೆಹೋವನು ಅನ್ನುತ್ತಾನೆ.
Explore ಯೆಶಾ 65:25
7
ಯೆಶಾ 65:19
ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರಲ್ಲಿ ಹರ್ಷಗೊಳ್ಳುವೆನು. ರೋದನ ಶಬ್ದವೂ, ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು.
Explore ಯೆಶಾ 65:19
Home
Bible
Plans
Videos