ಯೆಹೋವನು ತಿರುಗಿ ಗಿದ್ಯೋನನಿಗೆ, “ನಿನ್ನ ಬಳಿಯಲ್ಲಿರುವ ಜನರು ಇನ್ನೂ ಹೆಚ್ಚಾಗಿದ್ದಾರೆ; ನೀನು ಅವರನ್ನು ಹಳ್ಳಕ್ಕೆ ಕರೆದುಕೊಂಡು ಹೋಗು; ನಾನು, ಅಲ್ಲಿ ಈ ಜನರ ಸಂಖ್ಯೆಯನ್ನು ಕಡಿಮೆಮಾಡಿ ನಿನಗೆ ಕೊಡುವೆನು. ಯಾರು ನಿನ್ನ ಸಂಗಡ ಹೋಗಬಹುದೆಂದು ಹೇಳುವೆನೋ ಅವರು ಮಾತ್ರ ಹೋಗಲಿ; ಯಾರಿಗೆ ಹೋಗಬಾರದೆಂದು ಹೇಳುವೆನೋ ಅವರು ಹೋಗದಿರಲಿ” ಅಂದನು.