ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು;
ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.