ನೀವು ನಿಮ್ಮ ನಡತೆಯನ್ನು ಮತ್ತು ಕೃತ್ಯಗಳನ್ನು ಸಂಪೂರ್ಣವಾಗಿ ತಿದ್ದಿಕೊಂಡು ಕಕ್ಷಿ ಪ್ರತಿಕಕ್ಷಿಗಳಿಗೆ ಕೇವಲ ನ್ಯಾಯವನ್ನೇ ತೀರಿಸಿರಿ. ಪರದೇಶಿಯನ್ನಾಗಲಿ, ಅನಾಥನನ್ನಾಗಲಿ ಅಥವಾ ವಿಧವೆಯನ್ನಾಗಲಿ ಹಿಂಸಿಸದೆ, ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ, ನಿಮಗೆ ಹಾನಿಕರವಾದ ಅನ್ಯದೇವತೆಗಳಲ್ಲಿ ಭಕ್ತಿ ಇಡದೆ ಇದ್ದರೆ, ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪೂರ್ವಿಕರಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು.