ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ, “ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು. ಇದೆಲ್ಲದರಲ್ಲಿಯೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪುಹೊರಿಸಲೂ ಇಲ್ಲ.