ಎಡವಿ ಬೀಳುವವರನ್ನು ನಿನ್ನ ಮಾತುಗಳಿಂದ ಉದ್ಧರಿಸಿ,
ಕುಸಿಯುವ ಮೊಣಕಾಲುಗಳನ್ನು ದೃಢಪಡಿಸಿದ್ದಿ.
ಈಗಲಾದರೋ ನಿನಗೆ ಶ್ರಮೆ ಬಂತು, ಆದುದರಿಂದ ನೀನು ಬೇಸರಗೊಂಡಿರುವಿ.
ಅದು ನಿನ್ನನ್ನೇ ತಗಲಿರುವ ಕಾರಣ ನಿನಗೆ ಭ್ರಮೆಯುಂಟಾಗಿದೆ.
ನಿನ್ನ ನಂಬಿಕೆಗೆ ನಿನ್ನ ಭಯಭಕ್ತಿಯೂ,
ನಿನ್ನ ನಿರೀಕ್ಷೆಗೆ ನಿನ್ನ ಸನ್ಮಾರ್ಗವೂ ಆಧಾರವಲ್ಲವೋ?