1
ಲೂಕ 10:19
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.
Compare
Explore ಲೂಕ 10:19
2
ಲೂಕ 10:41-42
ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ. ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.
Explore ಲೂಕ 10:41-42
3
ಲೂಕ 10:27
ಅದಕ್ಕೆ ಅವನು, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ” ಅಂದನು.
Explore ಲೂಕ 10:27
4
ಲೂಕ 10:2
ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಬೆಳೆಯ ಯಜಮಾನನನ್ನು ಬೇಡಿಕೊಳ್ಳಿರಿ.
Explore ಲೂಕ 10:2
5
ಲೂಕ 10:36-37
ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು?” ಎಂದು ಕೇಳಿದ್ದಕ್ಕೆ, ಆ ಧರ್ಮೋಪದೇಶಕನು, “ಅವನಿಗೆ ದಯೆ ತೋರಿಸಿದವನೇ” ಅಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆ ಮಾಡು” ಎಂದು ಹೇಳಿದನು.
Explore ಲೂಕ 10:36-37
6
ಲೂಕ 10:3
ಹೋಗಿರಿ, ತೋಳಗಳ ನಡುವೆ ಕುರಿಮರಿಗಳಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ.
Explore ಲೂಕ 10:3
Home
Bible
Plans
Videos