ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನೆಂದರೆ,
“‘ಕರ್ತನ ದಾರಿಯನ್ನು ಸಿದ್ಧಮಾಡಿರಿ,
ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ.
ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು,
ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವುದು,
ಡೊಂಕಾಗಿರುವಂಥದು ನೆಟ್ಟಗಾಗುವುದು,
ಕೊರಕಲಾದ ದಾರಿಗಳು ಸಮವಾಗುವವು.
ಎಲ್ಲಾ ಮನುಷ್ಯರೂ ದೇವರಿಂದಾಗುವ ರಕ್ಷಣೆಯನ್ನು ಕಾಣುವರು’
ಎಂಬುದಾಗಿ ಮರುಭೂಮಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.