1
ಲೂಕ 6:38
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು.
Compare
Explore ಲೂಕ 6:38
2
ಲೂಕ 6:45
ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.
Explore ಲೂಕ 6:45
3
ಲೂಕ 6:35
ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.
Explore ಲೂಕ 6:35
4
ಲೂಕ 6:36
ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ.
Explore ಲೂಕ 6:36
5
ಲೂಕ 6:37
“ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.
Explore ಲೂಕ 6:37
6
ಲೂಕ 6:27-28
“ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ; ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ.
Explore ಲೂಕ 6:27-28
7
ಲೂಕ 6:31
ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ.
Explore ಲೂಕ 6:31
8
ಲೂಕ 6:29-30
ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ. ನಿನ್ನನ್ನು ಬೇಡುವವರೆಲ್ಲರಿಗೂ ಕೊಡು; ನಿನ್ನ ಸೊತ್ತನ್ನು ಕಸಿದುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ.
Explore ಲೂಕ 6:29-30
9
ಲೂಕ 6:43
ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಹಾಗೆಯೇ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.
Explore ಲೂಕ 6:43
10
ಲೂಕ 6:44
ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವುದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವುದಿಲ್ಲ, ಕಳ್ಳಿ ಗಿಡದಲ್ಲಿ ದ್ರಾಕ್ಷಿಹಣ್ಣುಗಳನ್ನು ಕೊಯ್ಯುಲು ಸಾಧ್ಯವಿಲ್ಲ.
Explore ಲೂಕ 6:44
Home
Bible
Plans
Videos