ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ” ಅಂದನು. ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.