ಅದಕ್ಕೆ ಯೇಸು, “‘ಇಸ್ರಾಯೇಲ್ ಜನರೇ ಕೇಳಿ, ನಮ್ಮ ದೇವರಾದ ಕರ್ತನು ಒಬ್ಬನೇ ದೇವರು. ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸಬೇಕು’ ಎಂಬುದೇ ಮುಖ್ಯವಾದ ಆಜ್ಞೆ. ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ ಎರಡನೆಯ ಆಜ್ಞೆ. ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ” ಎಂದು ಉತ್ತರ ಕೊಟ್ಟನು.