1
ಮಾರ್ಕ 16:15
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.
Compare
Explore ಮಾರ್ಕ 16:15
2
ಮಾರ್ಕ 16:17-18
“ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು; ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು.
Explore ಮಾರ್ಕ 16:17-18
3
ಮಾರ್ಕ 16:16
ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.
Explore ಮಾರ್ಕ 16:16
4
ಮಾರ್ಕ 16:20
ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.
Explore ಮಾರ್ಕ 16:20
5
ಮಾರ್ಕ 16:6
ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ
Explore ಮಾರ್ಕ 16:6
6
ಮಾರ್ಕ 16:4-5
ಸಮಾಧಿಯ ಕಡೆಗೆ ನೋಡಿದಾಗ ಆ ದೊಡ್ಡ ಕಲ್ಲು ಉರುಳಿಸಲ್ಪಟ್ಟಿರುವುದನ್ನು ಕಂಡರು. ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು.
Explore ಮಾರ್ಕ 16:4-5
Home
Bible
Plans
Videos