1
ಮಾರ್ಕ 6:31
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಆತನು ಅವರಿಗೆ, “ನೀವು ಮಾತ್ರ ಏಕಾಂತ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ” ಎಂದು ಹೇಳಿದನು. ಏಕೆಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ.
Compare
Explore ಮಾರ್ಕ 6:31
2
ಮಾರ್ಕ 6:4
ಯೇಸು ಅವರಿಗೆ, “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು; ಆದರೆ ಸ್ವಂತ ದೇಶದಲ್ಲಿಯೂ, ಸ್ವಂತ ಜನರಲ್ಲಿಯೂ, ಸ್ವಂತ ಮನೆಯಲ್ಲಿಯೂ ಗೌರವವಿಲ್ಲ” ಎಂದು ಹೇಳಿದನು.
Explore ಮಾರ್ಕ 6:4
3
ಮಾರ್ಕ 6:34
ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.
Explore ಮಾರ್ಕ 6:34
4
ಮಾರ್ಕ 6:5-6
ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ. ಅವರ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು.
Explore ಮಾರ್ಕ 6:5-6
5
ಮಾರ್ಕ 6:41-43
ಆ ಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಅದೇ ರೀತಿಯಲ್ಲಿ ಆ ಎರಡು ಮೀನುಗಳನ್ನೂ ಆತನು ಎಲ್ಲರಿಗೂ ಹಂಚಿಸಿದನು. ಅವರೆಲ್ಲರೂ ತೃಪ್ತರಾಗುವವರೆಗೂ ಊಟಮಾಡಿದರು. ರೊಟ್ಟಿಯ ತುಂಡುಗಳನ್ನೂ ಮೀನಿನ ತುಂಡುಗಳನ್ನೂ ಕೂಡಿಸಲಾಗಿ ಹನ್ನೆರಡು ಪುಟ್ಟಿಗಳು ತುಂಬಿದವು.
Explore ಮಾರ್ಕ 6:41-43
Home
Bible
Plans
Videos