ಎಲ್ಲಾ ಜನರ ಆಲೋಚನೆಗಳನ್ನು ಬಲ್ಲ ದೇವರು ಯೆಹೂದ್ಯರಲ್ಲದ ಜನರನ್ನೂ ಸ್ವೀಕರಿಸಿಕೊಂಡನು. ದೇವರು ನಮಗೆ ಪವಿತ್ರಾತ್ಮನನ್ನು ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮನನ್ನು ಕೊಟ್ಟು ಇದನ್ನು ರುಜುವಾತುಪಡಿಸಿದ್ದಾನೆ. ದೇವರ ದೃಷ್ಟಿಯಲ್ಲಿ ಅವರಿಗೂ ನಮಗೂ ಯಾವ ವ್ಯತ್ಯಾಸವಿಲ್ಲ. ಅವರು ನಂಬಿಕೊಂಡಾಗ, ದೇವರು ಅವರ ಹೃದಯಗಳನ್ನು ಶುದ್ಧೀಕರಿಸಿದನು.