ಪವಿತ್ರಾತ್ಮನು ಫಿಲಿಪ್ಪನಿಗೆ, “ರಥದ ಬಳಿಗೆ ಹೋಗಿ ಅದರ ಸಮೀಪದಲ್ಲಿ ನಿಂತುಕೊ” ಎಂದು ಹೇಳಿದನು. ಅಂತೆಯೇ ಫಿಲಿಪ್ಪನು ರಥದ ಬಳಿಗೆ ಹೋದನು. ಆ ಮನುಷ್ಯನು ಓದುತ್ತಿರುವುದು ಅವನಿಗೆ ಕೇಳಿಸಿತು. ಅವನು ಯೆಶಾಯನ ಪ್ರವಾದನಾ ಗ್ರಂಥವನ್ನು ಓದುತ್ತಿದ್ದನು. ಫಿಲಿಪ್ಪನು ಅವನಿಗೆ, “ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.
ಆ ಅಧಿಕಾರಿಯು “ನಾನು ಹೇಗೆ ಅರ್ಥಮಾಡಿಕೊಳ್ಳಲಿ? ಬೇರೆ ಯಾರಾದರೂ ನನಗೆ ಅದನ್ನು ವಿವರಿಸಬೇಕು!” ಎಂದು ಉತ್ತರಕೊಟ್ಟನು. ಬಳಿಕ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಅವನು ಫಿಲಿಪ್ಪನನ್ನು ಆಹ್ವಾನಿಸಿದನು.