ನಾನು ನಿನ್ನ ಸಂತಾನವನ್ನು ಆಕಾಶದಲ್ಲಿನ ನಕ್ಷತ್ರಗಳಷ್ಟು ಹೆಚ್ಚಿಸಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳವರು ನಿನ್ನ ಸಂತತಿಯಿಂದ ಆಶೀರ್ವಾದ ಹೊಂದುವರು. ನಾನೇ ಇದನ್ನು ನೆರವೇರಿಸುವೆನು; ಯಾಕೆಂದರೆ ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತುಗಳಿಗೆ ವಿಧೇಯನಾಗಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞೆಗಳನ್ನು, ಕಟ್ಟಳೆಗಳನ್ನು, ನಿಯಮಗಳನ್ನು ಕೈಕೊಂಡು ನಡೆದನು” ಎಂದು ಹೇಳಿದನು.