1
ಆದಿಕಾಂಡ 41:16
ಪರಿಶುದ್ದ ಬೈಬಲ್
ಯೋಸೇಫನು, “ಕನಸುಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ನನ್ನಲ್ಲಿಲ್ಲ. ಆ ಶಕ್ತಿಯನ್ನು ಹೊಂದಿರುವವನು ದೇವರೊಬ್ಬನೇ. ಆದರೆ ದೇವರು ಫರೋಹನಿಗೋಸ್ಕರ ಅರ್ಥವನ್ನು ತಿಳಿಸುವನು” ಎಂದು ಹೇಳಿದನು.
Compare
Explore ಆದಿಕಾಂಡ 41:16
2
ಆದಿಕಾಂಡ 41:38
ಫರೋಹನು ತನ್ನ ಸೇವಕರಿಗೆ, “ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಯೋಸೇಫನಿಗಿಂತಲೂ ಉತ್ತಮನಾದ ವ್ಯಕ್ತಿಯನ್ನು ಕಂಡುಕೊಳ್ಳಲು ಸಾಧ್ಯವೇ? ದೇವರಾತ್ಮನೇ ಇವನ ಸಂಗಡವಿದ್ದಾನೆ” ಎಂದು ಹೇಳಿದನು.
Explore ಆದಿಕಾಂಡ 41:38
3
ಆದಿಕಾಂಡ 41:39-40
ಫರೋಹನು ಯೋಸೇಫನಿಗೆ, “ದೇವರು ನಿನಗೆ ಈ ಎಲ್ಲಾ ವಿಷಯಗಳನ್ನು ತೋರಿಸಿರುವುದರಿಂದ ನಿನಗಿಂತ ಬುದ್ಧಿವಂತನೂ ವಿವೇಕಿಯೂ ಇಲ್ಲವೇ ಇಲ್ಲ. ಆದ್ದರಿಂದ ನಾನು ನಿನ್ನನ್ನು ದೇಶದ ರಾಜ್ಯಪಾಲನನ್ನಾಗಿ ನೇಮಿಸುವೆನು; ಜನರು ನಿನ್ನ ಆಜ್ಞೆಗಳಿಗೆಲ್ಲಾ ವಿಧೇಯರಾಗುವರು. ಈ ದೇಶದಲ್ಲಿ ನಿನಗೆ ಅಧಿಪತಿಯಾಗಿರುವವನು ನಾನೊಬ್ಬನೇ” ಎಂದು ಹೇಳಿದನು.
Explore ಆದಿಕಾಂಡ 41:39-40
4
ಆದಿಕಾಂಡ 41:52
ಎರಡನೆ ಮಗನು ಹುಟ್ಟಿದಾಗ, “ನನಗೆ ಕಷ್ಟ ಬಂದ ದೇಶದಲ್ಲೇ ದೇವರು ನನ್ನನ್ನು ಅಭಿವೃದ್ಧಿಪಡಿಸಿದನು” ಎಂದು ಹೇಳಿ, ಆ ಮಗುವಿಗೆ, “ಎಫ್ರಾಯೀಮ್” ಎಂದು ಹೆಸರಿಟ್ಟನು.
Explore ಆದಿಕಾಂಡ 41:52
5
ಆದಿಕಾಂಡ 41:51
ಮೊದಲನೆಯ ಮಗನು ಹುಟ್ಟಿದಾಗ, “ನನ್ನ ಎಲ್ಲಾ ಕಷ್ಟಗಳನ್ನೂ ನನ್ನ ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ನನಗೆ ಸಹಾಯ ಮಾಡಿದನು” ಎಂದು ಹೇಳಿ ಯೋಸೇಫನು ಆ ಮಗುವಿಗೆ, “ಮನಸ್ಸೆ” ಎಂದು ಹೆಸರಿಟ್ಟನು.
Explore ಆದಿಕಾಂಡ 41:51
Home
Bible
Plans
Videos