1
ಯೋಹಾನನ ಸುವಾರ್ತೆ 12:26
ಪರಿಶುದ್ದ ಬೈಬಲ್
ನನ್ನ ಸೇವೆ ಮಾಡುವವನು ನನ್ನನ್ನು ಹಿಂಬಾಲಿಸಬೇಕು. ಆಗ ನಾನು ಇರುವಲ್ಲೆಲ್ಲಾ ನನ್ನ ಸೇವಕನು ಇರುವನು. ನನ್ನ ಸೇವೆಮಾಡುವ ಜನರನ್ನು ನನ್ನ ತಂದೆಯು ಸನ್ಮಾನಿಸುವನು” ಎಂದು ಹೇಳಿದನು.
Compare
Explore ಯೋಹಾನನ ಸುವಾರ್ತೆ 12:26
2
ಯೋಹಾನನ ಸುವಾರ್ತೆ 12:25
ತನ್ನ ಸ್ವಂತ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಆದರೆ ಈ ಲೋಕದಲ್ಲಿ ತನ್ನ ಪ್ರಾಣವನ್ನು ದ್ವೇಷಿಸುವವನು ಅದನ್ನು ಉಳಿಸಿಕೊಳ್ಳುವನು. ಅವನು ನಿತ್ಯಜೀವವನ್ನು ಹೊಂದುವನು.
Explore ಯೋಹಾನನ ಸುವಾರ್ತೆ 12:25
3
ಯೋಹಾನನ ಸುವಾರ್ತೆ 12:24
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಗೋಧಿಯ ಕಾಳು ಭೂಮಿಗೆ ಬಿದ್ದು ಸಾಯಲೇಬೇಕು. ಬಳಿಕ ಅದು ಬೆಳೆದು ಅನೇಕ ಕಾಳುಗಳನ್ನು ಫಲಿಸುವುದು. ಸಾಯದಿದ್ದರೆ, ಅದು ಯಾವಾಗಲೂ ಕೇವಲ ಒಂದೇ ಕಾಳಾಗಿರುವುದು.
Explore ಯೋಹಾನನ ಸುವಾರ್ತೆ 12:24
4
ಯೋಹಾನನ ಸುವಾರ್ತೆ 12:46
ನಾನೇ ಬೆಳಕಾಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಕತ್ತಲೆಯಲ್ಲಿ ಇರಬಾರದೆಂದು ನಾನೇ ಈ ಲೋಕಕ್ಕೆ ಬಂದಿದ್ದೇನೆ.
Explore ಯೋಹಾನನ ಸುವಾರ್ತೆ 12:46
5
ಯೋಹಾನನ ಸುವಾರ್ತೆ 12:47
“ನಾನು ಈ ಲೋಕಕ್ಕೆ ಬಂದದ್ದು ಜನರಿಗೆ ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದಲ್ಲಿರುವ ಜನರನ್ನು ರಕ್ಷಿಸುವುದಕ್ಕಾಗಿ ನಾನು ಬಂದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿಯೂ ನಂಬದಿರುವ ಜನರಿಗೆ ತೀರ್ಪು ಮಾಡುವವನು ನಾನಲ್ಲ.
Explore ಯೋಹಾನನ ಸುವಾರ್ತೆ 12:47
6
ಯೋಹಾನನ ಸುವಾರ್ತೆ 12:3
ಆಗ ಮರಿಯಳು, ಬಹು ಬೆಲೆಬಾಳುವ ಸುಗಂಧತೈಲವನ್ನು ಅರ್ಧ ಲೀಟರಿನಷ್ಟು ತೆಗೆದುಕೊಂಡು ಬಂದು, ಯೇಸುವಿನ ಪಾದಗಳಿಗೆ ಹಚ್ಚಿದಳು. ಬಳಿಕ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರೆಸಿದಳು. ಆ ಪರಿಮಳದ್ರವ್ಯದ ಸುವಾಸನೆಯು ಇಡೀ ಮನೆಯನ್ನೇ ತುಂಬಿಕೊಂಡಿತು.
Explore ಯೋಹಾನನ ಸುವಾರ್ತೆ 12:3
7
ಯೋಹಾನನ ಸುವಾರ್ತೆ 12:13
ಜನರು ಖರ್ಜೂರದ ಗರಿಗಳನ್ನು ತೆಗೆದುಕೊಂಡು ಯೇಸುವನ್ನು ಎದುರುಗೊಳ್ಳಲು ಹೋದರು. “ಆತನಿಗೆ ಸ್ತೋತ್ರವಾಗಲಿ! ‘ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ದೇವರಾಶೀರ್ವಾದವಾಗಲಿ!’ ಇಸ್ರೇಲ್ ರಾಜನಿಗೆ ದೇವರಾಶೀರ್ವಾದವಾಗಲಿ!” ಎಂದು ಜನರು ಕೂಗಿದರು.
Explore ಯೋಹಾನನ ಸುವಾರ್ತೆ 12:13
8
ಯೋಹಾನನ ಸುವಾರ್ತೆ 12:23
ಯೇಸು ಅವರಿಗೆ, “ಮನುಷ್ಯಕುಮಾರನು ತನ್ನ ಮಹಿಮೆಯನ್ನು ಹೊಂದುವ ಸಮಯ ಇದೇ ಆಗಿದೆ.
Explore ಯೋಹಾನನ ಸುವಾರ್ತೆ 12:23
Home
Bible
Plans
Videos