1
ಯೋಹಾನನ ಸುವಾರ್ತೆ 13:34-35
ಪರಿಶುದ್ದ ಬೈಬಲ್
“ನಾನು ನಿಮಗೆ ಹೊಸ ಆಜ್ಞೆಯನ್ನು ಕೊಡುತ್ತೇನೆ. ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನೀವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ನೀವೂ ನನ್ನ ಶಿಷ್ಯರೆಂಬುದನ್ನು ಎಲ್ಲಾ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು.
Compare
Explore ಯೋಹಾನನ ಸುವಾರ್ತೆ 13:34-35
2
ಯೋಹಾನನ ಸುವಾರ್ತೆ 13:14-15
ನಿಮ್ಮ ಪ್ರಭುವೂ ಗುರುವೂ ಆಗಿರುವ ನಾನು ನಿಮ್ಮ ಪಾದಗಳನ್ನು ಸೇವಕನಂತೆ ತೊಳೆದೆನು. ಆದ್ದರಿಂದ ನೀವು ಸಹ ಒಬ್ಬರ ಪಾದಗಳನ್ನು ಇನ್ನೊಬ್ಬರು ತೊಳೆಯಬೇಕು. ಈ ಕಾರ್ಯಕ್ಕೆ ನಾನೇ ನಿಮಗೆ ಮಾದರಿಯಾಗಿದ್ದೇನೆ. ನಾನು ನಿಮಗೆ ಮಾಡಿದಂತೆ ನೀವೂ ಒಬ್ಬರಿಗೊಬ್ಬರು ಮಾಡಬೇಕು.
Explore ಯೋಹಾನನ ಸುವಾರ್ತೆ 13:14-15
3
ಯೋಹಾನನ ಸುವಾರ್ತೆ 13:7
ಯೇಸು, “ಈಗ ನಾನು ಏನು ಮಾಡುತ್ತಿರುವೆನೆಂದು ನಿನಗೆ ಗೊತ್ತಿಲ್ಲ. ಆದರೆ ಮುಂದೆ ನೀನು ಅರ್ಥಮಾಡಿಕೊಳ್ಳುವೆ” ಎಂದು ಉತ್ತರಕೊಟ್ಟನು.
Explore ಯೋಹಾನನ ಸುವಾರ್ತೆ 13:7
4
ಯೋಹಾನನ ಸುವಾರ್ತೆ 13:16
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸೇವಕನು ಒಡೆಯನಿಗಿಂತ ದೊಡ್ಡವನಲ್ಲ. ಆದ್ದರಿಂದ ಕೆಲಸಕ್ಕಾಗಿ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
Explore ಯೋಹಾನನ ಸುವಾರ್ತೆ 13:16
5
ಯೋಹಾನನ ಸುವಾರ್ತೆ 13:17
ನೀವು ಈ ಸಂಗತಿಗಳನ್ನು ತಿಳಿದುಕೊಂಡು ಇವುಗಳನ್ನು ಕೈಕೊಂಡು ನಡೆದರೆ ಸಂತೋಷದಿಂದಿರುವಿರಿ.
Explore ಯೋಹಾನನ ಸುವಾರ್ತೆ 13:17
6
ಯೋಹಾನನ ಸುವಾರ್ತೆ 13:4-5
ಅವರು ಊಟಮಾಡುತ್ತಿದ್ದಾಗ ಯೇಸು ಎದ್ದು ತನ್ನ ಮೇಲಂಗಿಯನ್ನು ತೆಗೆದಿಟ್ಟನು; ಅಂಗವಸ್ತ್ರವನ್ನು ಸೊಂಟಕ್ಕೆ ಕಟ್ಟಿಕೊಂಡನು. ಅನಂತರ ಒಂದು ಬೋಗುಣಿಗೆ ನೀರು ಸುರಿದುಕೊಂಡು ಶಿಷ್ಯರ ಕಾಲುಗಳನ್ನು ತೊಳೆದು ತಾನು ಕಟ್ಟಿಕೊಂಡಿದ್ದ ಅಂಗವಸ್ತ್ರದಿಂದ ಅವರ ಪಾದಗಳನ್ನು ಒರಸಿದನು.
Explore ಯೋಹಾನನ ಸುವಾರ್ತೆ 13:4-5
Home
Bible
Plans
Videos