“ನಾನು ಇವರಿಗಾಗಿಯೂ ಇವರ ವಾಕ್ಯದಿಂದ ನನ್ನಲ್ಲಿ ನಂಬಿಕೆ ಇಡುವ ಎಲ್ಲರಿಗಾಗಿಯೂ ಪ್ರಾರ್ಥಿಸುತ್ತಿದ್ದೇನೆ. ತಂದೆಯೇ, ನನ್ನಲ್ಲಿ ನಂಬಿಕೆ ಇಡುವ ಎಲ್ಲಾ ಜನರು ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ. ನೀನು ನನ್ನಲ್ಲಿ ನೆಲೆಸಿರುವೆ ಮತ್ತು ನಾನು ನಿನ್ನಲ್ಲಿ ನೆಲೆಸಿರುವೆ. ನೀನು ನನ್ನನ್ನು ಕಳುಹಿಸಿರುವೆಯೆಂದು ಈ ಲೋಕವು ನಂಬಿಕೊಳ್ಳುವುದಕ್ಕಾಗಿ ಈ ಜನರು ಸಹ ನಮ್ಮೊಂದಿಗೆ ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ.