ಅವರು ಊಟಮಾಡಿದ ಮೇಲೆ, ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ಇಲ್ಲಿರುವ ಇವರು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು.
ಪೇತ್ರನು, “ಹೌದು ಪ್ರಭುವೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು.
ಯೇಸು ಪೇತ್ರನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದನು.
ಎರಡನೆಯ ಸಾರಿ ಯೇಸು ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು.
ಪೇತ್ರನು, “ಹೌದು, ಪ್ರಭುವೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು.
ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಕಾಯಿ” ಎಂದನು.
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು.
ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು.
ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.