ಯೇಸು ಅವನಿಗೆ, “ಈ ಮೂವರಲ್ಲಿ (ಯಾಜಕ, ಲೇವಿ ಮತ್ತು ಸಮಾರ್ಯದವನು) ಯಾವನು ದರೋಡೆಗಾರರಿಂದ ಗಾಯಗೊಂಡಿದ್ದ ಮನುಷ್ಯನಿಗೆ ಪ್ರೀತಿ ತೋರಿಸಿದನು?” ಎಂದು ಕೇಳಿದನು.
ಧರ್ಮೋಪದೇಶಕನು, “ಅವನಿಗೆ ಸಹಾಯ ಮಾಡಿದವನೇ” ಎಂದು ಉತ್ತರಿಸಿದನು.
ಆಗ ಯೇಸು ಅವನಿಗೆ, “ಹಾಗಾದರೆ, ನೀನು ಹೋಗಿ ನೆರೆಯವರಿಗೆ ಹಾಗೆಯೇ ಮಾಡು!” ಎಂದನು.