ನಿನ್ನ ಬಳಿಗೆ ಬರುವುದಕ್ಕೂ ನನಗೆ ಯೋಗ್ಯತೆ ಇಲ್ಲ. ನೀನು ಕೇವಲ ಒಂದು ಆಜ್ಞೆ ಕೊಟ್ಟರೆ ಸಾಕು, ನನ್ನ ಆಳು ಗುಣಹೊಂದುವನು. ನಿನ್ನ ಅಧಿಕಾರವನ್ನು ನಾನು ತಿಳಿದುಕೊಂಡಿದ್ದೇನೆ. ನಾನೂ ಮತ್ತೊಬ್ಬರ ಅಧೀನದಲ್ಲಿದ್ದೇನೆ. ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ. ನಾನು ಒಬ್ಬ ಸೈನಿಕನಿಗೆ, ‘ಹೋಗು’ ಎಂದು ಹೇಳಿದರೆ, ಅವನು ಹೋಗುತ್ತಾನೆ. ಇನ್ನೊಬ್ಬ ಸೈನಿಕನಿಗೆ, ‘ಬಾ’ ಎಂದು ಹೇಳಿದರೆ, ಅವನು ಬರುತ್ತಾನೆ. ನನ್ನ ಆಳಿಗೆ, ‘ಇದನ್ನು ಮಾಡು’ ಎಂದು ಹೇಳಿದರೆ, ಅವನು ನನಗೆ ವಿಧೇಯನಾಗುತ್ತಾನೆ” ಎಂದು ಯೇಸುವಿಗೆ ಹೇಳಲು ಕಳುಹಿಸಿದನು.
ಯೇಸು ಇದನ್ನು ಕೇಳಿ ಆಶ್ಚರ್ಯಪಟ್ಟು ತನ್ನನ್ನು ಹಿಂಬಾಲಿಸುತ್ತಿದ್ದ ಜನರ ಕಡೆಗೆ ನೋಡಿ, “ಇಷ್ಟು ದೊಡ್ಡ ನಂಬಿಕೆಯಿರುವ ವ್ಯಕ್ತಿಯನ್ನು ನಾನು ಇಸ್ರೇಲಿನಲ್ಲಿಯೂ ನೋಡಲಿಲ್ಲ ಎಂದು ನಿಮಗೆ ಹೇಳುತ್ತೇನೆ” ಎಂದನು.