1
ಮತ್ತಾಯನ ಸುವಾರ್ತೆ 1:21
ಪರಿಶುದ್ದ ಬೈಬಲ್
ಆಕೆ ಒಬ್ಬ ಮಗನನ್ನು ಹೆರುವಳು. ನೀನು ಆ ಮಗುವಿಗೆ ಯೇಸು ಎಂದು ಹೆಸರಿಡುವೆ. ನೀನು ಆತನಿಗೆ ಆ ಹೆಸರನ್ನೇ ಇಡು; ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು” ಎಂದು ಹೇಳಿದನು.
Compare
Explore ಮತ್ತಾಯನ ಸುವಾರ್ತೆ 1:21
2
ಮತ್ತಾಯನ ಸುವಾರ್ತೆ 1:23
ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)
Explore ಮತ್ತಾಯನ ಸುವಾರ್ತೆ 1:23
3
ಮತ್ತಾಯನ ಸುವಾರ್ತೆ 1:20
ಯೋಸೇಫನು ಹೀಗೆ ಆಲೋಚಿಸಿಕೊಂಡನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಆ ದೂತನು, “ದಾವೀದನ ಮಗನಾದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ.
Explore ಮತ್ತಾಯನ ಸುವಾರ್ತೆ 1:20
4
ಮತ್ತಾಯನ ಸುವಾರ್ತೆ 1:18-19
ಯೇಸು ಕ್ರಿಸ್ತನ ತಾಯಿ ಮರಿಯಳು. ಯೇಸುವಿನ ಜನನ ಈ ರೀತಿ ಸಂಭವಿಸಿತು: ಮದುವೆಮಾಡಿಕೊಳ್ಳಲು ಯೋಸೇಫನಿಗೂ ಮರಿಯಳಿಗೂ ನಿಶ್ಚಿತಾರ್ಥವಾಗಿತ್ತು. ಆದರೆ ಮದುವೆಗೆ ಮೊದಲೇ ತಾನು ಗರ್ಭಿಣಿಯಾಗಿರುವುದು ಮರಿಯಳಿಗೆ ತಿಳಿದುಬಂತು. ಮರಿಯಳು ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಳು. ಮರಿಯಳನ್ನು ಮದುವೆಯಾಗಲಿದ್ದ ಯೋಸೇಫನು ನೀತಿವಂತನಾಗಿದ್ದನು. ಮರಿಯಳನ್ನು ಜನರ ಮುಂದೆ ನಾಚಿಕೆಪಡಿಸಲು ಅವನು ಇಷ್ಟಪಡಲಿಲ್ಲ. ಆದ್ದರಿಂದ ಅವನು ಗುಟ್ಟಾಗಿ ನಿಶ್ಚಿತಾರ್ಥವನ್ನು ರದ್ದುಗೊಳಿಸಬೇಕೆಂದಿದ್ದನು.
Explore ಮತ್ತಾಯನ ಸುವಾರ್ತೆ 1:18-19
Home
Bible
Plans
Videos